

ಮುದಗಲ್: ಪಟ್ಟಣದ ಜನರಿಗೆ ಸಮರ್ಪಕ ಕುಡಿವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಪ್ರವೀಣ ಬೋಗಾರ ತಿಳಿಸಿದರು.
ಪುರಸಭೆ ಕಾರ್ಯಾಲಯದಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಕುಡಿವ ನೀರು ಸೇರಿದಂತೆ ಮೂಲ ಸೌಕರ್ಯಗಳ ಕುರಿತು ಸಿಬ್ಬಂದಿ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ.
ಪಟ್ಟಣದ ಹಲವು ಸಮಸ್ಯೆಗಳ ಕುರಿತು ಗಮನಕ್ಕೆ ತಂದಿದ್ದಾರೆ. ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.