ಬಂಡವಾಳಶಾಹಿಗಳ ಹಿಡಿತದಲ್ಲಿ ದೇಶದ ಪ್ರಧಾನಿ

RB TIMMAPURE
Published on

ಮುಧೋಳ: ಕೃಷಿಕರಿಗೆ ಮಾರಕವಾಗುವ ಕರಾಳ ಕಾನೂನುಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರುವ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿ ರೈತ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಆರೋಪಿಸಿದರು.

ಸ್ವಗೃಹದಲ್ಲಿ ರೈತ ದಿನಾಚರಣೆಯಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ಹಾಗೂ ಅಂಬಾನಿಯಂತಹ ಅನೇಕ ಬಂಡವಾಳಶಾಹಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಪ್ರಧಾನಿ, ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾನೂನುಗಳನ್ನು ರೂಪಿಸುತ್ತಿದ್ದಾರೆ ಎಂದರು.

ದೇಶದ ರಾಜಧಾನಿ ನವದೆಹಲಿಯಲ್ಲಿ ಅನೇಕ ರೈತರು ಕೇಂದ್ರ ಸರ್ಕಾರದ ವಿರುದ್ಧ ಕೊರೆಯುವ ಚಳಿಯಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತಹ ಪ್ರತಿಭಟನಾಕಾರರನ್ನು ಕರೆದು ಮಾತನಾಡಿಸುವ ಸೌಜನ್ಯವನ್ನು ಕೂಡ ಪ್ರಧಾನಿ ತೋರದಿರುವುದು ದುರದೃಷ್ಟಕರ ಎಂದರು.

ನಗರದ ಎಪಿಎಂಸಿ ಬಳಿ ಧೀಮಂತ ರೈತ ಹೋರಾಟಗಾರ ದಿ.ರಮೇಶ ಗಡದನ್ನವರ ಅವರ ಪುತ್ಥಳಿ ಪ್ರತಿಷ್ಠಾಪಿಸುವ ಅಗತ್ಯವಿದೆ. ಈಗಾಗಲೇ ಈ ಕುರಿತು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net