ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ

MDL NEWS 13-1
Published on

ಮುಧೋಳ: ಮಾಧ್ಯಮ ಕ್ಷೇತ್ರ ಈಗ ಸಾಕಷ್ಟು ಬದಲಾವಣೆಯಾಗಿದೆ. ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕ್ಷಣಾರ್ಧದಲ್ಲಿಯೇ ಸುದ್ದಿಯನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಬಾಗಲಕೋಟೆ ಬಿ.ವಿ.ವಿ. ಸಂಘದ ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನೂತನ ಕಂಪ್ಯೂಟರ್ ಲ್ಯಾಬ್ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

ವಿಶ್ವವಿದ್ಯಾಲಯ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಐಚ್ಛಿಕ ವಿಷಯ ಆರಂಭಿಸುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ತರಬೇತಿ ನೀಡುತ್ತಿದೆ. ಇದರಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಹೆಚ್ಚು ಅನುಕೂಲವಾಗಲಿದೆ ಎಂದರು.

ಬಿ.ವಿ.ವಿ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ವಿಧಾನ ಪರಿಷತ್ ಸದಸ್ಯ ಹನುಮಂತ ಆರ್.ನಿರಾಣಿ, ಪ್ರಾಚಾರ್ಯ ಡಾ.ಎನ್.ಬಿ. ಇಂಗನಾಳ, ವಿಭಾಗದ ಮುಖ್ಯಸ್ಥ ಪ್ರೊ.ವಿಶ್ವನಾಥ ಎಸ್.ಮುನವಳ್ಳಿ, ಗಣ್ಯರಾದ ಬಿ.ಎಚ್. ಪಂಚಗಾಂವಿ, ಗುರುರಾಜ ಕಟ್ಟಿ, ಕೆ.ಆರ್. ಮಾಚಪ್ಪನವರ ಇತರರು ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net