ಮೂಡಿಗೆರೆ ಪಪಂ ಅಧ್ಯಕ್ಷರು, ಸದಸ್ಯರಿಂದ ಪಟ್ಟಣ ರೌಂಡ್ಸ್

12MDG2 (1)
Published on

ಮೂಡಿಗೆರೆ: ಮಾ.26ರಂದು ಪಪಂ ವಾರ್ಷಿಕ ಬಜೆಟ್ ಮಂಡನೆಯಾಗಲಿದ್ದು, 12ರಂದು ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಪೂರ್ವಭಾವಿ ಸಭೆಯಲ್ಲಿ ಜನರಿಂದ ಬಂದ ಸಲಹೆಗಳನ್ನು ಸ್ವೀಕರಿಸಿ ಅದರಂತೆ ಬಜೆಟ್ ತಯಾರಿಸಲಾಗುವುದು ಎಂದು ಪಪಂ ಅಧ್ಯಕ್ಷ ಕೆ.ವೆಂಕಟೇಶ್ ಹೇಳಿದರು.

ಪಟ್ಟಣದ ವಿವಿಧ ಬಡಾವಣೆಗಳಿಗೆ ಮಂಗಳವಾರ ತೆರಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪೌರಕಾರ್ಮಿಕರು, ಕುಡಿಯುವ ನೀರು ಪೂರೈಕೆ ಮಾಡುವವರು, ಚಾಲಕರು ಸೇರಿದಂತೆ ಎಲ್ಲರಿಗೂ ಮಾಸಿಕ ವೇತನ ನೀಡಲು ಬಜೆಟ್ ಮಂಡನೆ ಅಗತ್ಯವಾಗಿದೆ. ಅದಕ್ಕೂ ಮೊದಲು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ, ಪಪಂ ಇತಿಮಿತಿಯಲ್ಲಿ ಬಜೆಟ್ ಮಂಡಿಸಲಾಗುವುದು. ಶಾಸಕಿ ನಯನಾ ಮೋಟಮ್ಮ ಅವರೊಂದಿಗೆ ಚರ್ಚಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದುಕೊಳ್ಳಲು ಪ್ರಯತ್ನಿಸಲಾಗುವುದು. ಒಂದು ವಾರದಿಂದ ಪಟ್ಟಣದ ವಿವಿಧ ಬಡಾವಣೆಗಳಿಗೆ ಪ್ರತಿ ದಿನ ತೆರಳಿ ಜನರ ಬೇಡಿಕೆಗಳ ಬಗ್ಗೆ ಚರ್ಚಿಸಿ ಸ್ಥಳದಲ್ಲಿ ಇತ್ಯರ್ಥ ಪಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪಪಂ ಉಪಾಧ್ಯಕ್ಷ ಹೊಸಕೆರೆ ರಮೇಶ್ ಸದಸ್ಯರಾದ ಎಂ.ಎ.ಹಂಝ, ಜೆ.ಬಿ.ಧರ್ಮಪಾಲ್, ಗೀತಾ ರಂಜಾನ್ ಅಜಿತ್ ಕುಮಾರ್, ಪಪಂ ಆರೋಗ್ಯ ನಿರೀಕ್ಷಕ ಕೃಷ್ಣಯ್ಯ, ಇಂಜಿನಿಯರ್ ಇರ್ಶಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net