ರಕ್ತ ಪೂರೈಕೆ ನಿಟ್ಟಿನಲ್ಲಿ ವೆನ್ಲಾಕ್ ಆಸ್ಪತ್ರೆಯೊಂದಿಗೆ ಸಂಪರ್ಕ: ಇಬ್ರಾಹಿಂ ಕಲ್ಲೂರು ಭರವಸೆ

blood
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ರಕ್ತದ ಕೊರತೆಯಾಗುತ್ತಿದೆ ಎನ್ನುವ ಕೂಗು ಕೇಳಿಬರುತ್ತಿದೆ. ರಕ್ತದ ಸಮಸ್ಯೆ ಹೋಗಲಾಡಿಸುವ ಸಲುವಾಗಿ ಟ್ರಸ್ಟ್ ವಿವಿಧ ಸಂಘಟನೆಗಳ ಜತೆಗೆ ನಿರಂತರ ರಕ್ತದಾನ ಶಿಬಿರ ಆಯೋಜಿಸಿ ವೆನ್ಲಾಕ್ ಆಸ್ಪತ್ರೆಯೊಂದಿಗೆ ಸಂಪರ್ಕದಲ್ಲಿರಲಿದೆ ಎಂದು ಕಲ್ಲೂರು ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕಲ್ಲೂರು ಎಜುಕೇಷನ್ ಟ್ರಸ್ಟ್ ಕಾರವಾರ ಆಶ್ರಯದಲ್ಲಿ ಯೂತ್ ರೆಡ್‌ಕ್ರಾಸ್, ಎನ್‌ಎಸ್‌ಎಸ್ ರೇಂಜರ್ಸ್- ರೋವರ್ಸ್ ಘಟಕ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬೃಹತ್ ರಕ್ತದಾನ ಹಾಗೂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಹಿತಿ ನಾಗೇಶ್ ಕಲ್ಲೂರು ಮಾತನಾಡಿ, ಕಲಬೆರೆಕೆ ಆಹಾರಗಳಿಂದ ಆರೋಗ್ಯದಲ್ಲಿ ಸಮಸ್ಯೆ, ಕಾಯಿಲೆ ಜತೆ ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಕಳೆದ 30 ವರ್ಷಗಳಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ ಎಂದರು.

ದ.ಕ. ಜಿಲ್ಲಾ ಗೃಹರಕ್ಷಕದಳ ಕಮಾಂಡೆಂಟ್ ಡಾ.ಮುರಳೀ ಮೋಹನ್ ಚೂಂತಾರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಮಾಜಿ ಕುಲಸಚಿವ ಡಾ.ಎ.ಎಂ.ಖಾನ್, ಶಿಬಿರ ಸಂಚಾಲಕ ಅಝೀಝ್ ಕಲ್ಲೂರು, ಕಲ್ಲೂರು ಟ್ರಸ್ಟ್‌ನ ಉಮ್ಮರ್ ಕುಂಞಿ ಸಾಲೆತ್ತೂರು, ಸಂದೀಪ್ ರೇವಣ್ಕರ್ ಕಾರವಾರ ಮೊದಲಾದವರು ಉಪಸ್ಥಿತರಿದ್ದರು.

ಯೂತ್‌ರೆಡ್ ಕ್ರಾಸ್ ಸಂಚಾಲಕ ಪ್ರೊ.ಹೈದರ್ ಆಲಿ ಸ್ವಾಗತಿಸಿದರು. ರೇಂಜರ್ ಘಟಕ ಸಂಚಾಲಕಿ ಅಕ್ಷತಾ ಸುವರ್ಣ ರಕ್ತದಾನಿಗಳ ವಿವರ ನೀಡಿದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಶೋಭಾಮಣಿ ವಂದಿಸಿದರು. ವಿದ್ಯಾರ್ಥಿನಿ ಮರಿಯಂ ಸಫೀದ ನಿರೂಪಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಕೊಡಲಾಗುತ್ತದೆ. ರಿಪ್ಲೇಸ್‌ಮೆಂಟ್‌ಗಳನ್ನೂ ಕೇಳುವುದಿಲ್ಲ. ಇಂಡಿಯನ್ ರೆಡ್‌ಕ್ರಾಸ್ ನಡೆಸುವ 12 ಬ್ಲಡ್ ಬ್ಯಾಂಕ್‌ಗಳಿದ್ದು ಪ್ರತಿದಿನ 8ರಿಂದ 15,000 ಲೀ. ರಕ್ತದ ಅವಶ್ಯಕತೆಯಿದೆ. ರಕ್ತಕ್ಕಾಗಿ ಹಣ ಸುಲಿಗೆ ಮಾಡುತ್ತಾರೆ ಎನ್ನುವುದು ತಪ್ಪು ಮಾಹಿತಿ. ಇನ್ನೊಬ್ಬರ ಜೀವ ಉಳಿಸಲು ಮಾನವೀಯ ಗುಣವುಳ್ಳ ಮನುಷ್ಯನಾಗಬೇಕೇ ಹೊರತು ವೈದ್ಯನೇ ಆಗಬೇಕಿಲ್ಲ. ಡಾ.ಮುರಳೀ ಮೋಹನ್ ಚೂಂತಾರು, ಕಮಾಂಡೆಂಟ್, ದ.ಕ. ಜಿಲ್ಲಾ ಗೃಹರಕ್ಷಕ ದಳ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net