ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತ್ಯು

accident-15
Published on

ಉಳ್ಳಾಲ: ಮುಡಿಪು ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಶುಕ್ರವಾರ ಕಾರು ಡಿಕ್ಕಿ ಹೊಡೆದು ಪಾದಚಾರಿ ಕನ್ಯಾನ, ಕರೋಪಾಡಿ ಸಮೀಪದ ಮುಡಿಂಜಿಮಾರ್ ನಿವಾಸಿ ಸಿದ್ದೀಕ್ (45) ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಸಿದ್ದೀಕ್ ಕಾರಿನ ಮೇಲೆ ಬಿದ್ದು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಸಣ್ಣ ಮಗುವನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net