

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಮತ್ತು ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ಉದ್ಘಾಟಿಸಿದರು. ಶಾಲಾ ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ, ಮುದ್ರಾಡಿ ಗ್ರಾಪಂ ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯ ಸನತ್ ಕುಮಾರ್ ಎಸ್‌ಡಿಎಂಸಿ ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರು, ಪಾಲಕರು ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ಬೆಳಂಜೆ ಸ್ವಾಗತಿಸಿದರು. ಶಿಕ್ಷಕಿ ವಿಜಯ ಕಿಣಿ ನಿರೂಪಿಸಿದರು. ಶಿಕ್ಷಕಿ ಸುಮಲತಾ ವಂದಿಸಿದರು.