ಕರೊನಾ ನಿಯಂತ್ರಿಸಲಾಗುತ್ತಿಲ್ಲ, ಸರ್ಕಾರಗಳ ವಿರುದ್ಧ ಮುಖ್ಯಮಂತ್ರಿ ಚಂದ್ರು ಟೀಕೆ

Mukhyamantri Chandru PM in CTD
Published on

ಚಿತ್ರದುರ್ಗ:  ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಕರೊನಾ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲವೆಂದು ವಿಧಾನಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಕರೊನಾ ಹೆಸರಲ್ಲಿ ಬೊಕ್ಕಸವನ್ನು ಲೂಟಿ ಮಾಡಲಾಗುತ್ತಿದೆ.

ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸನ್ನಿವೇಶದಲ್ಲಿ ಶಾಲೆಗಳನ್ನು ಆರಂಭಿಸುವುದು ತೀರಾ ಅಪಾಯಕಾರಿ. ಜೀವ ಉಳಿಸಿಕೊಳ್ಳಲು ಜನಸಾಮಾನ್ಯರು ಪರದಾಡುತ್ತಿರುವಾಗ ಒಂದು ವರ್ಷ ಮಕ್ಕಳಿಗೆ ಶಿಕ್ಷಣ ಇಲ್ಲದಿದ್ದರೆ ಪ್ರಪಂಚ ಮುಳುಗದು. ಮಕ್ಕಳ ನ್ನು ಶಾಲೆಗಳಿಗೆ ಕಳಿಸಲು ಪೋಷಕರು ಹಿಂಜರಿಯುತ್ತಿದ್ದಾರೆಂಬುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಲಿ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಮುಖಂಡರಾದ ಮುದ ಸಿರ್‌ನವಾಜ್, ಅಬ್ದುಲ್ಲಾ, ಗಂಗಾಧರ್, ವಸೀಂ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net