ಕರ್ನಾಟಕ ಬ್ಯಾಂಕ್‌ಗೆ ಬೆಂಕಿ

Karnataka bank
Published on

ಮುಳಗುಂದ: ಪಟ್ಟಣದ ಕರ್ನಾಟಕ ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಪೀಠೋಪಕರಣಗಳು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ.

ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಏರ್‌ಕೂಲರ್, ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳೀಯರು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಸ್ಥಳಕ್ಕೆ ಶಿರಹಟ್ಟಿ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಪರಿಶೀಲಿಸಿದರು.

ಹೆಸ್ಕಾಂ ಸಿಬ್ಬಂದಿ, ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಬ್ಯಾಂಕ್ ಹತ್ತಿರವೇ ಪೆಟ್ರೋಲ್ ಬಂಕ್ ಇದ್ದು, ಸ್ಥಳೀಯರ ಸಕಾಲಿಕ ಸಹಕಾರದಿಂದ ತಕ್ಷಣವೇ ಬೆಂಕಿ ನಂದಿಸಿದ್ದರಿಂದ ಭಾರಿ ಅವಘಡ ತಪ್ಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net