ಮುಳಗುಂದ ಪಪಂ ಅಧ್ಯಕ್ಷರಾಗಿ ಹೊನ್ನಪ್ಪ

9mul1
Published on

ಮುಳಗುಂದ: ಪಪಂ ಅಧ್ಯಕ್ಷರಾಗಿ ಹೊನ್ನಪ್ಪ ಹನುಮಪ್ಪ ವಡ್ಡರ ಹಾಗೂ ಉಪಾಧ್ಯಕ್ಷರಾಗಿ ಖುರ್ಷಿದಾ ಮಹ್ಮದ್ ರಫೀಕ್ ಕಲ್ಲಾನವರ ಅವಿರೋಧವಾಗಿ ಆಯ್ಕೆಯಾದರು. ಪಪಂ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಶ್ರೀನಿವಾಸಮೂರ್ತಿ ಕುಲಕರ್ಣಿ ಅವಿರೋಧ ಆಯ್ಕೆ ಘೊಷಿಸಿದರು.

ಪಟ್ಟಣ ಪಂಚಾಯಿತಿ ಒಟ್ಟು 19 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ 15 ಕಾಂಗ್ರೆಸ್, ಮೂವರು ಬಿಜೆಪಿ ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದು ಕಾಂಗ್ರೆಸ್​ಗೆ ಸ್ಪಷ್ಟ ಬಹುಮತವಿದೆ. ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ಅಭಿವೃದ್ಧಿಯೇ ಮುಖ್ಯ ಗುರಿ: ನೂತನ ಅಧ್ಯಕ್ಷ ಹೊನ್ನಪ್ಪ ವಡ್ಡರ ಮಾತನಾಡಿ, ‘ನಮ್ಮ ಸೀತಾಲಹರಿ ಗ್ರಾಮಕ್ಕೆ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನ ಒಲಿದಿದೆ. ಈಗ ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಟ್ಟುಕೊಂಡು ಕೆಲಸ ಮಾಡುತ್ತೇವೆ. ಪಟ್ಟಣದ ಯಾವ ಕೆಲಸಗಳಿಗೂ ತೊಂದರೆಯಾಗದಂತೆ ನಿಗಾವಹಿಸುತ್ತೇವೆ. ಅಲ್ಲದೆ, ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತದೆ’ ಎಂದರು.

ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಕಾಂಗ್ರೆಸ್ ಮುಖಂಡರಾದ ಜಿ.ವಿ. ಬಳಗಾನೂರ, ಗದಗ ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಗದಗ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಿ.ವಿ. ಸುಂಕಾಪೂರ, ಆರ್.ಎನ್. ದೇಶಪಾಂಡೆ, ಎಸ್.ಎಂ. ನೀಲಗುಂದ, ಆರ್.ಸಿ. ಕಮಾಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net