ಹೊಸ ಲೋಗೋ ಅನಾವರಣ - ಮುಳಿಯ ಜುವೆಲ್ಸ್ ಇನ್ನು ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್

PTR_10 APR_3
Published on

ಪುತ್ತೂರು: ಮುಳಿಯ ಜುವೆಲ್ಸ್ ೮೧ ವರ್ಷಕ್ಕೂ ಅಽಕ ಪರಂಪರೆಯನ್ನು ಹೊಂದಿದ್ದು, ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಹೊಸ ಲಾಂಛನ ಬಿಡುಗಡೆ ಮಾಡಿದರು.

ಮುಳಿಯ ಸಿಎಂಡಿ ಕೇಶವಪ್ರಸಾದ್ ಮುಳಿಯ ಮಾತನಾಡಿ, ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು, ಹೊಸ ಟ್ರೆಂಡ್‌ಗಳನ್ನು ಹೊರಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜತೆಗೆ ಮುಳಿಯದ IZoಟಠಿ ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ ಶುದ್ಧತೆ ಮೀರಿದ ಪರಿಪೂರ್ಣತೆಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣಬಡಿಸಿದೆ ಎಂದರು.

ಈ ಹೊಸ ಲೋಗೋವನ್ನು ಪುತ್ತೂರಿನ ಸಾ-ವೇರ್ ಕಂಪನಿ ‘ದ ವೆಬ್ ಪೀಪಲ್’ ಮಾಡಿರುತ್ತದೆ ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ, ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net