ಕಲೆಗೆ ಜಾತಿಧರ್ಮದ ಭೇದವಿಲ್ಲ

udp-22-muliya
Published on

ಉಡುಪಿ: ಕಲೆಗೆ ಯಾವುದೇ ಜಾತಿ ಅಥವಾ ಧರ್ಮದ ಭೇದವಿಲ್ಲ. ಹಿರಿಯ ಪ್ರೋತ್ಸಾಹದಿಂದ ಯಕ್ಷಗಾನ ತಾಳಮದ್ದಲೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಯಕ್ಷಗಾನ ಅರ್ಥಧಾರಿ ಜಬ್ಬಾರ್​ ಸಮೊ ಹೇಳಿದರು.

ಶನಿವಾರ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ್​ ಅಕಾಡೆಮಿ ಆಫ್​ ಹೈಯರ್​ ಎಜುಕೇಶನ್​ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ದಿ. ಮನೋರಮಾ ಭಟ್​ ಅವರ ಆಡಿಯೊ ನಾಟಕಗಳು ಹಾಗೂ ಸ್ವಯಂವರ ಕೃತಿಗಳನ್ನು ಮುಖಿಯ ರಾಘವಯ್ಯ ಅವರು ಬಿಡುಗಡೆಗೊಳಿಸಿದರು.

ಶಿಕ್ಷಣ ತಜ್ಞ ಮಹಾಬಲೇಶ್ವರ ರಾವ್​ ಮುಖ್ಯ ಅತಿಥಿಯಾಗಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮಿನಾರಾಯಣ ಕಾರಂತ ಅವರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಎಲ್​. ಸಾಮಗ, ವಿಶ್ರಾಂತ ಪ್ರಾಧ್ಯಾಪಕ ನರಸಿಂಹ ಮೂರ್ತಿ ಆರ್​. ಉಪಸ್ಥಿತರಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಬಿ. ಜಗದೀಶ್​ ಶೆಟ್ಟಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net