ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ

New Project (17)
Published on

ಹಳೆಯಂಗಡಿ: ಕಾಂಗ್ರೆಸ್‌ಗೆ ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ತನ್ನದೇ ಆದ ಶಕ್ತಿ ಇದ್ದರೂ, ಕೆಲವೊಂದು ಚುನಾವಣೆಗಳಲ್ಲಿ ಹಿನ್ನಡೆಯಾಗಿರಬಹುದು. ಕಾರ್ಯಕರ್ತರು ಧೃತಿಗಡದೆ ತಮ್ಮ ಬೂತ್‌ಗಳಲ್ಲಿ ಪಕ್ಷ ಬಲಪಡಿಸಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ಭವಿಷ್ಯವಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಹೇಳಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್‌ನ ಮಾಸಿಕ ಸಭೆಯಲ್ಲಿ ಮಾತನಾಡಿದರು. ಕೆಪಿಸಿಸಿ ಸದಸ್ಯ ಎಚ್.ವಸಂತ ಬರ್ನಾಡ್ ಮಾತನಾಡಿ, ಬೂತ್ ಸಮಿತಿಗಳು ರಚನೆಯಾಗುತ್ತಿದ್ದು ಈ ಬಗ್ಗೆ ಕಾರ್ಯಕರ್ತರು ಪಕ್ಷಕ್ಕಾಗಿ ಸಮಯ ನೀಡುವಂತೆ ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಭಟ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಆಲ್ವಿನ್ ಉಪಸ್ಥಿತರಿದ್ದರು. ಪಂಚಾಯತ್‌ರಾಜ್ ಸಮಿತಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net