

ಮೂಲ್ಕಿ: ಮೂಲ್ಕಿ ಗೇರುಕಟ್ಟೆ ಬಳಿ ಸುಮಾರು 12 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೂಲ್ಕಿ ತಾಲೂಕು ಆಡಳಿತ ಕೇಂದ್ರ ಪ್ರಜಾಸೌಧ ಕಟ್ಟಡದ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು 12 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೂಲ್ಕಿ ತಾಲೂಕಿಗೆ ಅಗತ್ಯವಾದ ಸರ್ವ ಸಂಪನ್ಮೂಲ ಹೊಂದಿದ ಪ್ರಜಾಸೌಧ ಕಟ್ಟಡ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ ನಡೆಸಿ ಗುತ್ತಿಗೆದಾರರಿಂದ ಮಾಹಿತಿ ಪಡೆದು ಕಟ್ಟಡ ನಿರ್ಮಾಣ ವ್ಯವಸ್ಥೆಗಳ ಬಗ್ಗೆ ಸೂಚನೆ ನೀಡಿದರು.
ಎಸಿ ಹರ್ಷವರ್ಧನ, ಮೂಲ್ಕಿ ತಹಸೀಲ್ದಾರ್ ಶ್ರೀಧರ ಎಸ್.ಮೂಡಲಮನಿ, ಸಬ್ರಿಜಿಸ್ಟ್ರಾರ್ ರಾಜೇಶ್ವರಿ, ಮೂಲ್ಕಿ ನಪಂ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಅಧ್ಯಕ್ಷ ಸುನೀಲ್ ಆಳ್ವ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ ಶೆಟ್ಟಿ ಜಿ.ಎಂ., ಸದಸ್ಯರಾದ ಶೈಲೇಶ್ ಕುಮಾರ್, ಸುಭಾಷ್ ಶೆಟ್ಟಿ, ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಉಪತಹಸೀಲ್ದಾರ್ ದಿಲೀಪ್ ರೋಡ್ಕರ್, ಆರ್.ಐ.ಮೋಹನ್, ವಿ.ಎ.ಸುಜಿತ್, ಸಿಬ್ಬಂದಿ ರಿತೇಶ್ ಕುಮಾರ್ ಬಿಜೆಪಿ ನಾಯಕರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ಶ್ಯಾಮ್ ಪ್ರಸಾದ್, ನವೀನ್ ರಾಜ್, ವಿಠಲ್ ಎನ್.ಎಂ. ಮತ್ತಿತರರು ಉಪಸ್ಥಿತರಿದ್ದರು.