

ಮೈಸೂರು: ನಗರದ ಅರಮನೆ ಆವರಣದಲ್ಲಿ ಗುರುವಾರ ಅಭಿಮನ್ಯು ಸೇರಿದಂತೆ ದಸರಾ ಆನೆಗಳನ್ನು ವೀಕ್ಷಿಸಲು ಸಾಕಷ್ಟು ಜನರು ಆಗಮಿಸಿದ್ದರು. ಕೆಲವರು ಆನೆಯ ಬಳಿ ನಿಂತು ಫೋಟೋ ತೆಗೆಸಿಕೊಂಡರು. ಬಳಿಕ ಆನೆಗಳ ಮಜ್ಜನ ನೋಡಿ ಸಂಭ್ರಮಿಸಿದರು.
ಹಿರಿಯರು-ಕಿರಿಯರು ಎನ್ನದೆ ಸಾವಿರಾರು ಜನರು ಭೇಟಿ ನೀಡಿದ್ದರು. ಚಿಣ್ಣರ ಸಂಭ್ರಮವಂತೂ ಮುಗಿಲು ಮುಟ್ಟಿತ್ತು. ಆನೆಗಳನ್ನು ಹತ್ತಿರದಿಂದ ನೋಡಿ ಖುಷಿಪಟ್ಟರು.
ಆನೆ ಬಗ್ಗೆ ತಮ್ಮಲ್ಲಿದ್ದ ಕುತೂಹಲದ ಸಂಗತಿಗಳನ್ನು ಮಾವುತರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಂಡರು. ಕೆಲವರು ತಾವು ತಂದಿದ್ದ ಬಾಳೆಹಣ್ಣು, ಸಿಹಿ ತಿಂಡಿಗಳನ್ನು ಮಾವುತರ ಮೂಲಕ ಆನೆಗಳಿಗೆ ತಿನ್ನಿಸಿ ಸಂತಸಪಟ್ಟರು. ನಂತರ ತಾವು ತಂದಿದ್ದ ತಿಂಡಿಯನ್ನು ಅಲ್ಲಲ್ಲಿ ಕುಳಿತು ಸವಿದರು.