ಹಣಕಾಸು ವಂಚನೆ ಮುಂಬೈ ಉದ್ಯಮಿ ವಿಶ್ವನಾಥ್ ಶೆಟ್ಟಿ ಬಂಧನ

mng--31 may Vishwanatha shetty
Published on

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಎಂಬವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.


ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕರಾದ ರೋಹನ್ ಮೊಂತೆರೋ ಮತ್ತು ತೊಕ್ಕೊಟ್ಟಿನ ಹರ್ಷ ಫೈನಾನ್ಸ್ ಮಾಲೀಕ ಹರೀಶ್ ಎಂಬವರಿಗೆ, 1.75 ಕೋಟಿ ರೂ.ಗಳನ್ನು ವಿಶ್ವನಾಥ್ ಶೆಟ್ಟಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಟ್ಟಡ ನಿರ್ಮಾಣ ಸಂಸ್ಥೆಗೆ 300 ಕೋಟಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ವಿಶ್ವನಾಥ್ ಶೆಟ್ಟಿ ಮತ್ತು ಮುಂಬೈನ ಕದಂ ಎಂಬವರು ಸೇರಿ ರೋಹನ್ ಮತ್ತು ಹರೀಶ್ ರವರಿಂದ 1.75 ಕೋಟಿ ರೂಗಳನ್ನು ಮುಂಗಡ ಪಡೆದಿದ್ದರು. ನಂತರ ಹಣಕಾಸು ನೆರವು ಒದಗಿಸಿದೆ ವಂಚನೆ ನಡೆಸಿದ್ದಾರೆ ಎಂದು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು.


ಬಂಧಿತ ವಿಶ್ವನಾಥ ಶೆಟ್ಟಿ ಅವರನ್ನು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net