

ವಿಜಯವಾಣಿ ಸುದ್ದಿಜಾಲ ಧಾರವಾಡ
ಇತ್ತೀಚೆಗೆ ಏರ್ಪಡಿಸಿದ್ದ ನರೇಂದ್ರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮುಮ್ಮಿಗಟ್ಟಿ ಸರ್ಕಾರಿ ಪ್ರೌಢಶಾಲೆ ಮಕ್ಕಳು ಉತ್ತಮ ಸಾಧನೆ ಮಾಡುವ ಮೂಲಕ ಸಮಗ್ರ ವೀರಾಗ್ರಣಿ ಪಡೆದಿದ್ದಾರೆ.
ಕೂಟದಲ್ಲಿ ಒಟ್ಟು 10 ಬಂಗಾರದ ಪದಕ, 5 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ. ಬಾಲಕ ಹಾಗೂ ಬಾಲಕಿಯರ ಥ್ರೋಬಾಲ್ನಲ್ಲಿ ಪ್ರಥಮ, ಬಾಲಕಿಯರ ವಾಲಿಬಾಲ್ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದಲ್ಲದೆ ಕಬಡ್ಡಿಯಲ್ಲಿ ಬಾಲಕ ಹಾಗೂ ಬಾಲಕಿಯರ ತಂಡಗಳು ದ್ವೀತಿಯ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ಮಕ್ಕಳಿಗೆ ಶಾಲೆ ಮುಖ್ಯಾಧ್ಯಾಪಕಿ ಕೆ.ಜೆ. ಅಸ್ನೋಟಿಕರ್, ಎಸ್ಡಿಎಂಸಿ ಅಧ್ಯಕ್ಷ ರಾಜು ಮಲ್ಲೂರ, ದೈಹಿಕ ಶಿಕ್ಷಣ ಶಿಕ್ಷಕಿ ಉಮಾ ತಡಕೋಡ ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.