ವಸತಿ ಶಾಲೆ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

30-mnd-1 hebbar vasati
Published on

ಮುಂಡಗೋಡ: ನಿಮ್ಮ ಮಕ್ಕಳನ್ನು ಎಷ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಿರೋ ಅಷ್ಟೇ ಪ್ರೀತಿಯಿಂದ ವಸತಿ ಶಾಲೆಯ ಮಕ್ಕಳನ್ನು ನೋಡಿಕೊಳ್ಳಬೇಕು. ಅವರ ರಕ್ಷಣೆ ನಮ್ಮ, ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ತಾಲೂಕಿನ ಪಾಳಾ ಗ್ರಾಮದಲ್ಲಿ ಶುಕ್ರವಾರ ನೂತನವಾಗಿ ನಿರ್ವಿುಸಿರುವ ಇಂದಿರಾಗಾಂಧಿ ವಸತಿ ಶಾಲೆ ಪ್ರಾರಂಭೋತ್ಸವ ಮತ್ತು ಕಟ್ಟಡ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಬಿಟ್ಟು ಉಳಿದೆಲ್ಲ ಶಾಲಾ ಕಾಲೇಜ್​ಗಳಿಗೂ ಸ್ವಂತ ಕಟ್ಟಡಗಳಿದ್ದವು. ಹೀಗಾಗಿ 18 ಕೋಟಿ ರೂ. ವೆಚ್ಚದಲ್ಲಿ ವಿಶಾಲವಾದ ಪ್ರದೇಶದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿದ್ದೇವೆ. ಮಕ್ಕಳಿಗೆ ಕೊಡುವ ಆಹಾರ ಪದಾರ್ಥ ಹಾಗೂ ವಸ್ತುಗಳ ಕುರಿತು ಜಾಗೃತೆವಹಿಸಿ ಯಾವುದೇ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದರು. ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೆಹಳ್ಳಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಧಿಕಾರಿ ಮಹದೇವಪ್ಪ ಹ್ಯಾಟಿ, ಪಾಳಾ ಗ್ರಾಪಂ ಅಧ್ಯಕ್ಷರು, ಪಿಡಿಒ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net