ಮುಂಡಗೋಡ ತಾಪಂ ಅಧ್ಯಕ್ಷರಾಯ್ಕೆ 20ರಂದು

MND TP
Published on

ಮುಂಡಗೋಡ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಆ. 20ರಂದು ನಡೆಯಲಿದೆ ಎಂದು ತಹಸೀಲ್ದಾರ್ ಶಂಕರ ಗೌಡಿ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಿ ಸದಸ್ಯರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳಗ್ಗೆ 9ರಿಂದ 11ಗಂಟೆಯವರೆಗೆ ನಾಮಪತ್ರ ಸಲ್ಲಿಕೆ. 1ರಿಂದ 1.15ರವರೆಗೆ ನಾಮಪತ್ರ ಪರಿಶೀಲನೆ. 1.15ರಿಂದ 1.30ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ, ನಂತರ ಅಗತ್ಯ ಬಿದ್ದರೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪಟ್ಟಣ ಪಂಚಾಯಿತಿಗೆ ಬಿಜೆಪಿಯಿಂದ 10 ಹಾಗೂ ಕಾಂಗ್ರೆಸ್‌ನಿಂದ 9 ಸದಸ್ಯರು ಆಯ್ಕೆಯಾಗಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ನಾಲ್ವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದರೆ ಅತ್ತ ನಾಲ್ವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಎರಡೂ ಪಕ್ಷದ ಹೈಕಮಾಂಡ್‌ಗಳು ತಮ್ಮ ಪಕ್ಷಗಳ ಗುರ್ತಿನ ಮೇಲೆ ಆಯ್ಕೆಯಾದವರಿಗೆ ವಿಪ್ ಜಾರಿ ಮಾಡಲು ಸಿದ್ಧತೆ ನಡೆಸಿವೆ. ಇನ್ನೊಂದೆಡೆ ಮಹಿಳೆಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆರಲು ತೀವ್ರ ಪೈಪೋಟಿ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net