ವೀರಭದ್ರೇಶ್ವರ ಪಲ್ಲಕ್ಕಿ ಮೆರವಣಿಗೆ

11 MDG
Published on

ಮುಂಡರಗಿ: ಶ್ರಾವಣ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಪಟ್ಟಣ ಸೇರಿ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಕ್ತರು ದೇವಸ್ಥಾನಗಳಿಗೆ ತೆರಳಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಸ್ಥಳೀಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನ ತಲುಪಿತು. ದೇವಸ್ಥಾನದಲ್ಲಿ ಬೆಳಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆಗಳು ಜರುಗಿದವು. ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಂಜೆ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ವೀರಭದ್ರೇಶ್ವರ ದೇವರ ಉತ್ಸವ ಸಕಲ ಮಂಗಳ ವಾದ್ಯಗಳೊಂದಿಗೆ ನೆರವೇರಿತು. ಭಕ್ತರು ಸರದಿಯಲ್ಲಿ ನಿಂತು ದರ್ಶನ ಪಡೆದುಕೊಂಡರು.

ಪಟ್ಟಣದ ಕೋಟೆಭಾಗದ ಜಗದ್ಗುರು ಅನ್ನದಾನೀಶ್ವರ ಮಹಾಶಿವಯೋಗಿಗಳವರ ಮೂಲಕರ್ತೃ ಗದ್ದುಗೆ ಜಾತ್ರಾ ಮಹೋತ್ಸವದ ಅಂಗವಾಗಿ ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತಿತರ ಪೂಜೆಗಳು ನಡೆದವು. ಭಕ್ತರು ಗದ್ದುಗೆಯ ದರ್ಶನ ಪಡೆದರು. ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಶ್ರಾವಣದ ಕಡೆ ಸೋಮವಾರ ನಿಮಿತ್ತ ದೇವಸ್ಥಾನಗಳಲ್ಲಿ ಪ್ರಸಾದ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net