ಜಲಾಶಯಗಳಿಗೆ ಸೂಕ್ತ ಭದ್ರತೆ ಒದಗಿಸಲು ಮನವಿ

MND SANAVALLI JALASHAYA
Published on

ಮುಂಡಗೋಡ: ರಾಷ್ಟ್ರದಲ್ಲಿನ ಪ್ರಸ್ತುತ ಬೆಳವಣಿಗೆ ಹಿನ್ನೆಲೆಯಲ್ಲಿ ತಾಲೂಕಿನ ಜಲಾಶಯಗಳಿಗೆ ಸೂಕ್ತ ಭದ್ರತೆ ನೀಡುವಂತೆ ಚಿಕ್ಕ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಎಂ. ದಫೇದಾರ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಭಾರತ-ಪಾಕಿಸ್ತಾನ ಯುದ್ಧ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಿರುವ ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಗಳು ತಾಲೂಕಿನಲ್ಲಿ ಚಿಗಳ್ಳಿ, ಬಾಚಣಕಿ, ಅತ್ತಿವೇರಿ ದೊಡ್ಡ ಜಲಾಶಯಗಳಿದ್ದು, ನ್ಯಾಸರ್ಗಿ, ಸನವಳ್ಳಿ, ರಾಮಾಪುರ, ಅಟ್ಟಣಗಿ, ಶಿಂಗ್ನಳ್ಳಿ ಐದು ಸಣ್ಣ ಜಲಾಶಯಗಳಿವೆ. ಇವೆಲ್ಲವುಗಳ ಸುತ್ತಲೂ ಅರಣ್ಯ ಪ್ರದೇಶವಿದ್ದು, ಅವುಗಳ ಸುರಕ್ಷತೆ ಹಾಗೂ ಭದ್ರತಾ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಮುಖ್ಯ ಜಲಾಶಯಗಳಿಗೆ ಪೊಲೀಸ್ ಭದ್ರತೆ ನೀಡಬೇಕು ಎಂದು ಅವರು ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net