

ಹೊನ್ನಾಳಿ: ಮಳೆಗಾಲ ಈಗಾಗಲೇ ಪ್ರಾರಂಭವಾಗಿದ್ದು, ಚರಂಡಿಗಳಲ್ಲಿರುವ ಎಲ್ಲ ಕಸ- ಕಡ್ಡಿಗಳನ್ನು ತೆಗೆದು ಸ್ವಚ್ಛ ಮಾಡಿಸಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಮೈಲಪ್ಪ ಹೇಳಿದರು.
ಶುಕ್ರವಾರ ಹೊನ್ನಾಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಚರಂಡಿ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಗೌರಿಹಳ್ಳ, ಕೆಎಸ್ಆರ್ಟಿಸಿ ರಸ್ತೆ, ಮರಳೋಣಿ ರಸ್ತೆ, ಮಾರಿಕೊಪ್ಪ, ಟಿ.ಬಿ.ವೃತ್ತ ಮತ್ತು ನ್ಯಾಮತಿ ಎಡ ಹಾಗೂ ಬಲಭಾಗದ ರಸ್ತೆಗಳನ್ನು ಸ್ವಚ್ಛ ಮಾಡಿಸಲಾಗಿದೆ. ಬಾಕಿ ಇರುವ ಸಂಪಿಗೆ ರಸ್ತೆ ಹಾಗೂ ಇತರ ರಸ್ತೆಗಳನ್ನು ಸ್ವಚ್ಛ ಮಾಡಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಟ್ಟಣದಲ್ಲಿರುವ ಎಲ್ಲ ಚರಂಡಿಗಳ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿದ್ದೇವೆ. ಇದರಿಂದ ಚರಂಡಿ ನೀರು ರಸ್ತೆಗೆ ನುಗ್ಗದೇ ಸರಾಗವಾಗಿ ರಾಜ ಕಾಲುವೆ ಮುಖಾಂತರ ಹರಿದು ಹೋಗುತ್ತದೆ ಎಂದರು.
ನಾಗರಿಕರಲ್ಲಿ ಎಷ್ಟೇ ಮನವಿ ಮಾಡಿದರೂ ಸ್ಪಂದಿಸದೆ ಪ್ಲಾಸ್ಟಿಕ್ ಅನ್ನು ಚರಂಡಿ ಹಾಗೂ ಸಾರ್ವಜನಿಕ ಸ್ಥಳದಲ್ಲೇ ಎಸೆಯುತ್ತಿದ್ದಾರೆ. ಇನ್ನು ಮುಂದಾದರೂ ಪ್ಲಾಸ್ಟಿಕ್ ಬಳಕೆ ಬಿಡಿ. ಅಥವಾ ಬಳಸಬೇಕಾದ ಅನಿವಾರ್ಯತೆ ಇದ್ದರೆ ಉಪಯೋಗಿಸಿದ ಪ್ಲಾಸ್ಟಿಕ್ ಅನ್ನು ಕಸದ ವಾಹನಗಳಲ್ಲಿ ಹಾಕಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಬಿ ಖಾತಾ ನೋಂದಣಿ ವಿಸ್ತರಣೆ: ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿ- ಖಾತಾ ನೀಡುವ ಅವಧಿಯನ್ನು ರಾಜ್ಯ ಸರ್ಕಾರ ಮೂರು ತಿಂಗಳವರೆಗೆ ವಿಸ್ತರಿಸಿದೆ. ಬಿ- ಖಾತಾ ಮಾಡಿಕೊಳ್ಳುವವರು ಕೂಡಲೇ ಮಾಡಿಕೊಳ್ಳಿ. ಇದುವರೆಗೆ 300 ಬಿ- ಖಾತೆಗಳನ್ನು ಮಾಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಲೀಲಾವತಿ ಮಾಹಿತಿ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್ನಾಯ್್ಕ ಶಿವಣ್ಣ, ಹಳದಪ್ಪ, ಪೌರ ಕಾರ್ವಿುಕರು ಹಾಗೂ ಆಟೋ ಚಾಲಕರು ಇದ್ದರು.