ಮತಗಟ್ಟೆಗಳಿಗೆ ಪುರಸಭೆ ಮುಖ್ಯಾಧಿಕಾರಿ ಭೇಟಿ

19blrp1
Published on

ಬೇಲೂರು: ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಇಂದೂ ಅವರು ಪಟ್ಟಣ ವ್ಯಾಪ್ತಿಯ 23 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲಿಸಿದರು.

ಪಟ್ಟಣದ ಉರ್ದು ಶಾಲೆಯಲ್ಲಿರುವ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ನಮ್ಮ ಕಚೇರಿಯಿಂದ ತಂಡಗಳನ್ನು ರಚಿಸಿ ಪುರಸಭೆ ವ್ಯಾಪ್ತಿಯಲ್ಲಿ ಬಂಟಿಂಗ್ಸ್, ಬ್ಯಾನರ್, ವಾಲ್ ರೈಟಿಂಗ್ಸ್, ಪೋಸ್ಟರ್ಸ್‌, ಫ್ಲೆಕ್ಸ್‌ಗಳನ್ನು ತೆರವು ಮಾಡಿಸಲಾಗುತ್ತಿದೆ. ಚುನಾವಣಾಧಿಕಾರಿಗಳ ಆದೇಶದಂತೆ ಎಲೆಕ್ಷನ್‌ಗೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಎಲ್ಲ 23 ಮತಗಟ್ಟೆಗಳಿಗೂ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಪುರಸಭೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು. ಆರೋಗ್ಯಾಧಿಕಾರಿ ಡಾ. ಲೋಹಿತ್ ಕುಮಾರ್, ಕಂದಾಯಾಧಿಕಾರಿ ಪ್ರಸನ್ನ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net