ಸಿಹಿ ಹಂಚಿ ಸಂಭ್ರಮಿಸಿದ ನಗರಸಭೆ ಸದಸ್ಯರು

6-KGLPHOTO-1,,,,
ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಕೊಳ್ಳೇಗಾಲ ನಗರಸಭೆ ಕಚೇರಿ ಮುಂಭಾಗ ಗುರುವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
Published on

ಕೊಳ್ಳೇಗಾಲ: ಪಟ್ಟಣದ ನಗರಸಭೆ ಕಚೇರಿ ಮುಂಭಾಗ ಗುರುವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ನಗರಸಭೆ ಕಚೇರಿ ಮುಂದೆ ಸಮಾವೇಶಗೊಂಡ ನಗರಸಭೆ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಜೈಕಾರ ಕೂಗಿದರು. ಈ ವೇಳೆ ನಗರಸಭೆ ಸದಸ್ಯ ಶಾಂತರಾಜು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುದು ಮತ್ತೆ ಸಾಬೀತು ಆಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ತೆಕ್ಕೆಗೆ ಕ್ಷೇತ್ರ ದೊರೆತಿದ್ದು. ಆದರೆ ಈ ಬಾರಿ ನಮ್ಮ ಅಭ್ಯರ್ಥಿ ಸುನೀಲ್ ಬೋಸ್ 1,88,706 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿಯನ್ನು ಮಣಿಸಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಕ್ಷೇತ್ರದ ಪ್ರದಕ್ಷಿಣೆ ಹಾಕಿ ಕೊಳ್ಳೇಗಾಲ ಕ್ಷೇತ್ರದಿಂದ 33 ಸಾವಿರ ಮತ ಲೀಡ್ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಗೆಲುವಿನ ಸಾಧನೆ ಮಾಡಿದೆ. ಮುಂದೆ ಸ್ವತಂತ್ರವಾಗಿ ಆಡಳಿತ ಮಾಡಲಿದೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ರಮೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮಹಿಳಾ ಸಬಲೀಕರಣಕ್ಕೆ ವಿಧ ಯೋಜನೆಗಳನ್ನು ತರಲಿದೆ. ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ ಎಂದರು.

ನಗರಸಭೆ ಸದಸ್ಯರಾದ ಎ.ಪಿ.ಶಂಕರ್, ಮಂಜುನಾಥ್, ರಾಘವೇಂದ್ರ, ಸುರೇಶ್, ಶಾಂತರಾಜು, ಧರಣೇಶ್, ಮನೋಹರ್ ಮುಖಂಡರಾದ ನರಸಿಂಹನ್, ಪ್ರಭುಸ್ವಾಮಿ, ರಾಜೇಂದ್ರ, ಜಗದೀಶ್, ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net