ನಗರಸಭೆ ಉಪಾಧ್ಯಕ್ಷರಾಗಿ ಶ್ರೀದೇವಿ ಅವಿರೋಧ ಆಯ್ಕೆ

CTD IMG_20221214_132316-66
Published on

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ನೂತನ ಉಪಾಧ್ಯಕ್ಷರಾಗಿ,33ನೇ ವಾರ್ಡ್ ಸದಸ್ಯೆ ಜಿ.ಎಸ್.ಶ್ರೀದೇವಿ ಚಕ್ರವರ್ತಿ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ಮಂಜುಳಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶ್ರೀದೇವಿ ಅವರೊಬ್ಬರೇ ನಾಮಪತ್ರ ಸ ಲ್ಲಿಸಿದ್ದರಿಂದ, ಚುನಾವಣಾಧಿಕಾರಿಯೂ ಆಗಿದ್ದ ತಹಸೀಲ್ದಾರ್ ಸತ್ಯನಾರಾಯಣ ಅವರು,ಶ್ರೀದೇವಿ ಅವರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಘೋಷಿಸಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಈ ಚುನಾವಣಾ ಸಭೆಗೆ,ನಗರಸಭೆ 35 ಸದಸ್ಯರ ಪೈಕಿ 27 ಸದಸ್ಯರು ಹಾಜರಾಗಿದ್ದರು,ಇವರೊಂದಿಗೆ ಸಂ ಸದ,ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೂ ಗೈರು ಹಾಜರಾಗಿದ್ದರು. ಆಯ್ಕೆ ಬಳಿಕ ಮಾತನಾಡಿದ ಶ್ರೀದೇವಿ ಅವರು,ನಗರದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡುವುದಾಗಿ ಹೇಳಿದರು. ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್,ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net