ಮುನಿಗೋಪಾಲ್ ರಾಜು ಸೆಸ್ಕ್ ಎಂಡಿ

K M Munigopalaraj
Published on

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎಂ.ಮುನಿಗೋಪಾಲ್ ರಾಜು ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಜಿ.ಶೀಲಾ ಅವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ನಿಗಮದ ತಾಂತ್ರಿಕ ನಿರ್ದೇಶಕರಾಗಿದ್ದ ಕೆ.ಎಂ.ಮುನಿಗೋಪಾಲ್ ರಾಜು ಅವರನ್ನು ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಲಾಗಿತ್ತು. ಇದೀಗ ಅವರನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಿ ಇಂಧನ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net