'ಆರ್​.ಆರ್​.ನಗರ ಉಪಚುನಾವಣೆಯಲ್ಲಿ ಮುನಿರತ್ನ ಈಗಾಗಲೇ ಗೆದ್ದಾಗಿದೆ...!'

Sudhakar 1
Published on

ಚಿಕ್ಕಬಳ್ಳಾಪುರ: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಈಗಾಗಲೇ ಗೆದ್ದಿದ್ದಾರೆ. ಈಗ ದೊಡ್ಡ ಮತಗಳ ಅಂತರ ಗೆಲುವಿಗಾಗಿ ಬೇಟೆಯಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ ಕೆ.ಸುಧಾಕರ್ ತಿಳಿಸಿದ್ದಾರೆ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಮತಗಟ್ಟೆಯಲ್ಲಿ ಆಗ್ನೇಯ ವಿಧಾನಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆಯಲ್ಲಿದ್ದಾರೆ. 40 ರಿಂದ 50 ಸಾವಿರ ಹೆಚ್ಚು ಮತಗಳ ಅಂತರದ ದೊಡ್ಡ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಶಿರಾದಲ್ಲಿ ಬಿಜೆಪಿ ಶಕ್ತಿ ಇರಲಿಲ್ಲ. ಆದರೆ, ಬಿಜೆಪಿ ಸರ್ಕಾರದ ಆಡಳಿತ ನೀತಿ ಮೆಚ್ಚಿ, ಮಹಿಳೆಯರು, ಯುವಕರು, ರೈತರು ಸೇರಿ ಹಲವು ವಲಯಗಳ ಒಲವು ಪಕ್ಷದ ಪರ ವ್ಯಕ್ತವಾಗಿದೆ. ಈಗಾಗಲೇ ಪಕ್ಷದ ಪ್ರಭಾವಿ ನಾಯಕರಾದ ವಿಜಯೇಂದ್ರರವರು ಗೆಲುವಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿ ಶ್ರಮಿಸುತ್ತಿದ್ದಾರೆ. ಇದರಿಂದ ಅಲ್ಲಿನ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡರು ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದರು.

ಚುನಾವಣೆಗಳು ದೊಡ್ಡ ಹಬ್ಬ ಇದ್ದಂತೆ. ಮತದಾರರು ಪ್ರಾಮಾಣಿಕವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net