

ಮಸ್ಕಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಟ್ಟಣದಲ್ಲಿ ಅಲ್ಪ ಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದ್ದು, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕೆಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್ ಸಾಬ್ ಮುದ್ದಾಪುರ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಈಡೇರಿಸಿದ್ದಾರೆ. ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ಸಮುದಾಯ ಹಿಂದುಳಿದಿದೆ. ಮುರಾರ್ಜಿ ವಸತಿ ಶಾಲೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪಡೆದು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.
ಪ್ರಮುಖರಾದ ಅಬ್ದುಲ್ ಗನಿಸಾಬ್, ಹುಸೇನ್ ಬಾಷಾ ಬಳಗಾನೂರು, ಶಬ್ಬೀರ್ ಚೌದ್ರಿ, ನೂರ್ ಮೊಹಮ್ಮದ್, ಸದ್ದಾಂ ಗುಡಿಹಾಳ ಇದ್ದರು.