

ಕವಿತಾಳ: ಮುರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಇದನ್ನೂ ಓದಿ: ಕಾವ್ಯಕ್ಕೆ ಜಾನಪದ ಶಕ್ತಿ ತುಂಬಿದವರು ಸಿದ್ದಲಿಂಗ ದೇಸಾಯಿ
ಪಿಸಿಎಂಬಿ, ಪಿಸಿಎಂಸಿ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ದೇವದುರ್ಗದ ಮುರಾರ್ಜಿ ದೇಸಾಯಿ ಪಪೂ ಕಾಲೇಜು ಮತ್ತು ಸಿಂಧನೂರು ತಾಲೂಕಿನ ಉಮಲೂಟಿ ಮುರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಅರ್ಜಿ ಪಡೆದು ಮೇ 14ರೊಳಗೆ ಸಲ್ಲಿಸಬೇಕು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಪಠ್ಯಪುಸ್ತಕ, ಸಮವಸ್ತ್ರ ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.9742822013 ಸಂಪರ್ಕಿಸಬಹುದು ಎಂದು ವಸತಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಸಮನ್ವಯಾಧಿಕಾರಿ ವಿಜಯಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.