ಕೊಲೆ ಆರೋಪಿ ತಮಿಳುನಾಡಿನಲ್ಲಿ ಬಂಧನ

IMG_20231215_141829.jpg
Published on

ಚನ್ನಪಟ್ಟಣ

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ಮೂಲದ ಮುರುಗೇಶ್ (40) ಕೊಲೆ ಆರೋಪಿ. ಈತ ತಮಿಳುನಾಡಿನ ಇನ್ನಿಬ್ಬರು ಸ್ನೇಹಿತರ ಸಹಕಾರದಿಂದ ಕೊಲೆ ಮಾಡಿರುವುದು ದೃಢಪಟ್ಟಿದೆ‌.

ಕೊಲೆ ಆರೋಪಿಯಾದ ಮುರುಗೇಶ್, ಈ ಹಿಂದೆ ಯೋಗೇಶ್ವರ್ ಸಹೋದರ ಗಂಗಾಧರ್ ಎಂಬುವವರ ತೋಟದ ಕಾವಲುಗಾರನಾಗಿದ್ದ. ಮಹದೇವಯ್ಯನವರ ತೋಟದ ಪಕ್ಕದಲ್ಲಿದ್ದ ಈ ತೋಟದಲ್ಲಿ ಪತ್ನಿಯ ಸಮೇತ ನೆಲೆಸಿದ್ದ. ಆದರೆ, ಈತನನ್ನು ಕೆಲಸದಿಂದ ಇತ್ತೀಚಿಗೆ ತೆಗೆದುಹಾಕಲಾಗಿತ್ತು.

ಹಣಕ್ಕಾಗಿ ಕೃತ್ಯ?!

ಈ ಹಿಂದೆ ಇಲ್ಲಿ ಕೆಲಸ ಮಾಡುವಾಗ ಮುರುಗೇಶ್ ಮಹದೇವಯ್ಯನವರ ವಿಶ್ವಾಸ ಗಳಿಸಿದ್ದ‌. ಜಮೀನು ಮಾರಿರುವ ಹಿನ್ನೆಲೆಯಲ್ಲಿ ಮಹದೇವಯ್ಯ ನವರ ಬಳಿ ಅಪಾರವಾದ ಹಣವಿದೆ ಎಂಬ ಮಾಹಿತಿಯಿಂದ, ತಮಿಳುನಾಡಿನ ತನ್ನಿಬ್ಬರು ಸ್ನೇಹಿತರ ಸಹಕಾರದಿಂದ ಈ ಕೃತ್ಯ ಎಸಗಿದ್ದಾನೆ‌.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net