ಸಹೋದರನ ಕೊಲೆ ಆರೋಪಿಗಳ ಬಂಧನ

Published on

ಸುಳ್ಯ: ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಉಸ್ಮಾನ್ ಎಂಬುವರನ್ನು ಕೊಲೆಗೈದ ಆರೋಪಿಗಳನ್ನು ಕೊಡಗು ಪೊಲೀಸರು ಶನಿವಾರ ಕೇರಳದಲ್ಲಿ ಬಂಧಿಸಿದ್ದಾರೆ.

ಉಸ್ಮಾನ್ ಸಹೋದರರಾದ ರಫೀಕ್ ಮತ್ತು ಸತ್ತಾರ್ ಬಂಧಿತರು. ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಜುಲೈ 14ರಂದು ಕೊಲೆ ಮಾಡಿದ್ದರು. ಬಳಿಕ ಅವರು ಆಟೋದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ಆಟೋದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net