ಹತ್ಯೆ ಆರೋಪಿ ಪ್ರಕಾಶ್ ಬಂಧನ

Murder accused Prakash arrested
Published on

ಮಡಿಕೇರಿ
ಸೋಮವಾರಪೇಟೆ ತಾಲೂಕು ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಪ್ರಕಾಶ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಮ್ಮಿಯಾಲದ ತನ್ನ ಮನೆ ಬಳಿಯಲ್ಲಿ ಪ್ರಕಾಶ್ ಶನಿವಾರ ಸಿಕ್ಕಿಬಿದ್ದಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಮಹಜರು ನಡೆಸಲು ಕರೆದೊಯ್ದ ಸಂದರ್ಭ ಈತ ತಾನು ಕತ್ತರಿಸಿದ್ದ ಮೀನಾಳ ತಲೆಯನ್ನು ಇಟ್ಟಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸಿದ್ದು, ರುಂಡವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುಮಾರು ೩೦೦ ಮೀ. ದೂರದಲ್ಲಿ ಮೀನಾಳ ತಲೆ ಸಿಕ್ಕಿದೆ. ಆರೋಪಿಯ ರಕ್ತಸಿಕ್ತ ಬಟ್ಟೆಗಳು ಮತ್ತು ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.
ಈ ಮಧ್ಯೆ ಪ್ರಕಾಶ್ ನಡೆಸಿದ ಹಲ್ಲೆಯಿಂದ ಗಾಯಗೊಂಡಿದ್ದ ಮೀನಾಳ ಪೋಷಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಮಾನಸಿಕವಾಗಿ ತೀವ್ರ ಗಾಸಿಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net