

ಮಂಗಳೂರು: ನಗರದ ಹೊರ ವಲಯದ ಕಾಟಿಪಳ್ಳ 8ನೇ ಬ್ಲಾಕ್‌ನಲ್ಲಿ ಬುಧವಾರ ಸಂಜೆ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಝ್ ಎಂಬಾತನ ಕೊಲೆಗೆ ಯತ್ನ ನಡೆದಿದೆ.
ತಂಡವೊಂದು ಮಾರಕಾಯುಧಗಳಿಂದ ಗಂಭೀರ ಸ್ವರೂಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಎರಡು ವರ್ಷದ ಹಿಂದೆ ಕಾಟಿಪಳ್ಳದಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ನ್ಯಾಯಾಂಗ ಬಂಧನದಲ್ಲಿದ್ದ ಈತ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ. ಈತನ ವಿರುದ್ಧ ಗಾಂಜಾ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.