ಕುತ್ತಿಗೆ ಕೊಯ್ದು ಕೊಲೆ, ಮೂವರಿಗೆ ಜೀವಾವಧಿ ಶಿಕ್ಷೆ

dist Court building
ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on

ಶಿವಮೊಗ್ಗ: ತಾಲೂಕಿನ ಹೊಳಲೂರಿನಲ್ಲಿ ವೈಯಕ್ತಿಕ ದ್ವೇಷದಿಂದ ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ ಮೂವರಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ನೀಡಿ ಆದೇಶಿಸಿದೆ.

ಹೊಳಲೂರು ಗ್ರಾಮದ ರಿಯಾಸ್(22), ಮುನಿರಾಜು (33) ಮತ್ತು ಅರುಣ್(20) ಶಿಕ್ಷೆಗೆ ಒಳಗಾದವರು. ಮೂವರು 2020ರ ಜು.27ರಂದು ರಾತ್ರಿ ಅದೇ ಗ್ರಾಮದ ಮಲ್ಲೇಶಪ್ಪ(39) ಎಂಬುವರನ್ನು ಅವರ ಜಮೀನು ಬಳಿ ಹತ್ಯೆ ಮಾಡಿದ್ದರು.
ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಟಿ.ಸಂಜೀವ್‌ಕುಮಾರ್ ಅವರು ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಜೆ.ಮರುಳಸಿದ್ಧಾರಾಧ್ಯ ಮೂವರಿಗೂ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಬಿ.ಎಸ್.ಮಮತಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net