ದಲಿತ ಮುಖಂಡನ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

Davanagere Jagaluru, Murder, Case, Protest
Published on

ಜಗಳೂರು: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ದಲಿತ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷ ಸಿದ್ದು ಅರ್ಜುನ್ ಕಣಮಡ್ಡಿ ಅವರ ಹತ್ಯೆ ಖಂಡಿಸಿ ಗುರುವಾರ ತಾಲೂಕು ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ದಸಂಸ ರಾಜ್ಯದಾದ್ಯಂತ ಹೋರಾಟ ಕೈಗೊಳ್ಳಲಿದೆ ಎಂದು ಸಮಿತಿ ಸಂಚಾಲಕ ಮಲೆ ಮಾಚಿಕೆರೆ ಸತೀಶ್ ಎಚ್ಚರಿಕೆ ನೀಡಿದರು.

ದಲಿತರ ಮೇಲೆ ದೌರ್ಜನ್ಯ, ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ, ತಡೆಯುವಲ್ಲಿ ಗೃಹ ಇಲಾಖೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಸಿ. ಬಸವರಾಜ್, ದಸಂಸ ಪದಾಧಿಕಾರಿಗಳಾದ ರಾಕೇಶ್, ಪಿ.ವೈ. ಮಲ್ಲೇಶ್, ಎಚ್. ಅಶೋಕ್, ಎಂ. ಕರಿಬಸಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net