ಕ್ಯಾಂಪಸ್ ನಲ್ಲೆ ವಿದ್ಯಾರ್ಥಿನಿಗೆ ಚಾಕು ಇರಿತ

Published on

ಹುಬ್ಬಳ್ಳಿ: ಕಾಲೇಜ್ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ನಗರದಲ್ಲಿ ನಡೆದಿದೆ.

ಇಲ್ಲಿಯ ವಿದ್ಯಾನಗರದ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಈ ಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದಿದ್ದ ಯುವಕನೊಬ್ಬ ಕಾಲೇಜಿನ ಎಂಸಿಎ ವಿಭಾಗದಲ್ಲಿ ಓದುತ್ತಿದ್ದ ನೇಹಾ ಎಂಬ ವಿದ್ಯಾಥಿರ್ನಿಗೆ ಕ್ಯಾಂಪಸ್ನಲ್ಲಿ ಮನಬಂದಂತೆ ಚಾಕು ಇರಿದು ಪರಾರಿಯಾಗಿದ್ದಾನೆ.

ಘಟನೆಯಿಂದ ತೀವ್ರ ಗಾಯಗೊಂಡಿದ್ದ ವಿದ್ಯಾಥಿರ್ನಿಯನ್ನು ಸ್ಥಳದಲ್ಲಿದ್ದ ಜನರು ಕೂಡಲೇ ಸಮೀಪದ ಕಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಾಗಲೇ ತೀವ್ರ ರಕ್ತಸ್ರಾವವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net