ರಾಮನಗರ: ಮನೆಯಲ್ಲಿದ್ದ 13 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಕೊಲೆ ಮಾಡಿದ್ದು, ಇದಕ್ಕೂ ಮುನ್ನ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಕೊಪ್ಪಳ ಮೂಲದ ವಲಸೆ ಕಾರ್ಮಿಕ ದಂಪತಿ ನಾಲ್ವರು ಮಕ್ಕಳೊಂದಿಗೆ ಬೆಂಗಳೂರು ದಣ ತಾಲೂಕಿನ ತಾವರಕೆರೆ ಪಟ್ಟಣದಲ್ಲಿ ಒಂದೂವರೆ ವರ್ಷದಿಂದ ವಾಸವಾಗಿದ್ದರು. ದಂಪತಿಯ ಮೂರನೇ ಪುತ್ರಿ ಕೊಲೆಯಾದಾಕೆ.
ದಂಪತಿ ಗಾರೆ ಕೆಲಸ ಮಾಡಿಕೊಂಡಿದ್ದು, ಮೂವರು ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಆದರೆ, ಕೊಲೆಯಾದ ಬಾಲಕಿ ಶಾಲೆಗೆ ಹೋಗುತ್ತಿರಲಿಲ್ಲ ಎನ್ನಲಾಗಿದೆ.
ಶಾಲೆಗೆ ಹೋಗಿದ್ದ ಬಾಲಕಿ ಸಹೋದರ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಊಟಕ್ಕೆಂದು ಮನೆಗೆ ಬಂದಿದ್ದಾನೆ. ಈ ವೇಳೆ ಚಿಲಕ ತೆಗೆದು ಮನೆಯ ಒಳಗೆ ಹೋಗಿ ನೋಡಲಾಗಿ, ಅಕ್ಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ತಣ ಪಾಲಕರಿಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ತಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಮೃತ ದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅತ್ಯಾಚಾರ ಶಂಕೆ?: ಬಾಲಕಿ ಮೇಲೆ ಹಲ್ಲೆ ನಡೆಸುವುದಕ್ಕೂ ಮುನ್ನ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಬೈಕ್ ಒಂದರಲ್ಲಿ ಬಂದ ಯುವಕನೊಬ್ಬ ಅತ್ಯಾಚಾರ ನಡೆಸಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ನಂತರ ಬೈಕ್ನಲ್ಲಿಯೇ ಸಿಲಿಂಡರ್ ಒಂದನ್ನು ತೆಗೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿ ಲಾಭೂ ರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯಾಹ್ನ 2.30 ಸುಮಾರಿಗೆ ಈ ಬಗ್ಗೆ ಮಾಹಿತಿ ಬಂದಿದೆ. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿಲ್ಲ. ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ವೈದ್ಯರು ದೃಢಪಡಿಸಬೇಕಿದೆ. > ಆರ್. ಶ್ರೀನಿವಾಸಗೌಡ ಎಸ್ಪಿ, ಬೆಂಗಳೂರು ದಣ ಜಿಲ್ಲೆ