ಬೆಂಗಳೂರಿನಲ್ಲಿ ಹಾಡಹಗಲೇ ಆಟೋ ಚಾಲಕನ ಬರ್ಬರ ಹತ್ಯೆ

auto
Published on

ಬೆಂಗಳೂರು: ಹಾಡ ಹಗಲಿನಲ್ಲೇ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಡಿಜೆ ಹಳ್ಳಿ ಶಾಂಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ವಿನೋದ್​ ಅಲಿಯಾಸ್​ ಗುಂಡ (32) ಹೆಸರಿನ ಆಟೋ ಚಾಲಕ ರೈಲ್ವೆ ನಿಲ್ದಾಣದ ಬಳಿ ಬಾಡಿಗೆ ಸಿಗಬಹುದೆಂಬ ನಿರೀಕ್ಷೆಯಲ್ಲಿ ಆಟೋದಲ್ಲಿ ಕುಳಿತಿದ್ದ. ಆದರೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಆತನ ಕುತ್ತಿಗೆ ಕೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ.

ಹಳೇ ವೈಷಮ್ಯದಿಂದಲೇ ಈ ಕೊಲೆ ನಡೆದಿರುಬಹುದು ಎಂದು ಹೇಳಲಾಗಿದೆ. ಸದ್ಯ ಪ್ರಕರಣವು ಡಿಜೆ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net