

ತೂಬಗೆರೆ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಮನೆಯ ಹೊರಗೆ ಮಲಗಿದ್ದ ವೃದ್ಧನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಕೊಲೆ ಮಾಡಿದ್ದಾರೆ. ತೂಬಗೆರೆ ಹೋಬಳಿಯ ವಾಸುದೇವನಹಳ್ಳಿಯ ಈರಣ್ಣ (70) ಹತ್ಯೆಗೀಡಾದವರು.ಈರಣ್ಣ ಅವರು ಮನೆ ಹೊರಗೆ ಮಲಗಿದ್ದಾಗ ದುಷ್ಕರ್ಮಿಗಳು ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಚಾಕುವನ್ನು ಕುತ್ತಿಗೆಯಲ್ಲೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದರು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.