ನಾಲ್ಕೂರಿನಲ್ಲಿ ಕತ್ತಿಯಿಂದ ಕಡಿದು ಕೊಲೆ

Hospet murder case
Published on

ಹೆಬ್ರಿ: ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ನಾಲ್ಕೂರು ಪೇಟೆ ಬಳಿ 45 ವರ್ಷದ ಗಣಪತಿ ನಾಯ್ಕ ಎಂಬುವರನ್ನು ಅವರ ಮನೆಯಲ್ಲೇ ಕೊಲೆ ಮಾಡಿರುವುದು ಬುಧವಾರ ನಡೆದಿದೆ. ಕತ್ತಿಯಿಂದ ಕಡಿದು ಕೊಲೆಗೈದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ವಿಪರೀತ ಕುಡಿತದ ಚಟ ಹೊಂದಿದ್ದ ಗಣಪತಿ ನಾಯ್ಕ ಕುಡಿದು ಗಲಾಟೆ ಮಾಡುತ್ತಿದ್ದರು. ಮಧ್ಯಾಹ್ನ ಕೂಡ ಪತ್ನಿಯೊಂದಿಗೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net