ಹಂತಕನಿಗೆ ಉಗ್ರ ಶಿಕ್ಷೆಯಾಗಲಿ

19-04-Shiva-1
Published on

ರಾಯಚೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಲವ್ ಜಿಹಾದ್ ಕಾರಣಕ್ಕಾಗಿ ಭೀಕರವಾಗಿ ಹತ್ಯೆ ಮಾಡಿರುವ ಫಯಾಜ್‌ಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಹತ್ಯೆ ಮಾಡಿರುವುದು ವಿದ್ಯಾರ್ಥಿ ಸಮೂಹದಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ದೂರಿದರು. ನೇಹಾ ಹಿರೇಮಠರನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಫಯಾಜ್, ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ 9 ಬಾರಿ ಇರಿದು ಹತ್ಯೆ ಮಾಡಿರುವುದು ಆತನ ಕ್ರೂರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಘಟನೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಫಯಾಜ್‌ಗೆ ಸಹಕರಿಸಿದವರನ್ನೂ ಬಂಧಿಸಬೇಕು. ರಾಜ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net