ಕೊಲೆಗಾರನಿಗೆ ಕಠಿಣ ಶಿಕ್ಷೆ ವಿಧಿಸಿ

27.ktal.01
Published on

ಕವಿತಾಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಯುವಕನ ಕೊಲೆ ಖಂಡಿಸಿ ಕಂದಾಯ ನೀರಿಕ್ಷಕ ಮಲ್ಲಿಕಾರ್ಜುನಗೆ ದಲಿತ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.

ಇದಕ್ಕೂ ಮುನ್ನ ಶಿವಪ್ಪನ ಮಠದಿಂದ ನಾಡ ತಹಸಿಲ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಾಡಕಚೇರಿ ಮುಂದೆ ಸಭೆ ನಡೆಸಿದ ಸಂಘಟನೆಗಳ ಸದಸ್ಯರು, ದಲಿತರು ಜೀವಭಯದಿಂದ ಜೀವನ ನಡೆಸುವಂತಾಗಿದೆ. ಸರ್ಕಾರ ದಲಿತರಿಗೆ ರಕ್ಷಣೆ ನೀಡದೆ ನಿರ್ಲಕ್ಷೃ ಮಾಡುತ್ತಿದೆ. ಸಂಗನಾಳ ಗ್ರಾಮದಲ್ಲಿ ಹಾಡಹಗಲೇ ಕ್ಷೌರ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವುದು ಖಂಡನೀಯವಾಗಿದೆ. ಕೊಲೆಗಾರನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕೊಲೆಯಾದ ಯುವಕನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net