ಕಾಂಗ್ರೆಸ್ ಸರ್ಕಾರ ಇರುವವರೆಗೂ ಹಂತಕರಿಗೆ ರಕ್ಷಣೆ: ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ

B.Y.Raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಮಂಗಳೂರಿನಲ್ಲಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮಾಡಿರುವ ಹಂತಕರನ್ನು ಕೂಡಲೇ ಬಂಧಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಮೇಲಿನ ಆರೋಪ ತನಿಖೆಯಾಗುತ್ತಿದೆ. ಹೀಗಿರುವಾಗಲೇ ಕಾನೂನು ಕೈಗೆತ್ತಿಕೊಂಡು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಗೂಂಡಾಗಿರಿ ಪ್ರದರ್ಶಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಹಂತಕರಿಗೆ ರಕ್ಷಣೆ ಸಿಗುತ್ತದೆ. ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಗೆ ಕಾರಣರಾದವರನ್ನು ಹೊರ ಬಿಟ್ಟಿದ್ದಾರೆ. ಹೀಗಾಗಿ ಪದೇ ಪದೇ ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ. ಈ ಬಗ್ಗೆ ಕಠಿಣ ಕ್ರಮಕೈಗೊಳ್ಳದಿದ್ದರೆ ಸರ್ಕಾರ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಜನಗಣತಿ ಜತೆಗೆ ಜಾತಿಗಣತಿಗೂ ಕೇಂದ್ರ ಸರ್ಕಾರ ಮುಂದಾಗಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ. ಜಾತಿಗಣತಿಯನ್ನು ಎಲ್ಲರೂ ಸ್ವಾಗತ ಮಾಡುತ್ತೇವೆ. ಸಂವಿಧಾನ ಬಂದ ನಂತರ ಮೊದಲ ಬಾರಿಗೆ ಜಾತಿ ಗಣತಿಯನ್ನು ಮಾಡಲಾಗುತ್ತಿದೆ. ಸಮಾಜದಲ್ಲಿ ಎಲ್ಲ ಸಮುದಾಯದ ಜನರಿಗೆ ಸಮಾನ ಅವಕಾಶ ಕೊಡಲು, ಜಾತಿ ಜನಸಂಖ್ಯಾವಾರು ಅವಕಾಶಗಳನ್ನು ಕೊಡುವ ದೃಷ್ಟಿಯಿಂದ ಜಾತಿ ಜನಗಣತಿ ಬಹಳ ಮುಖ್ಯವಾಗಿದೆ. ದೇಶಾದ್ಯಂತ ಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net