

ಕೊಪ್ಪಳ: ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಇಬ್ಬರ ಕೊಲೆಯಾಗಿದೆ. ಒಬ್ಬಾತನಿಗೆ ಗಂಭೀರ ಗಾಯಗಳಾಗಿದ್ದು ಸಾವು-ಬದುಕಿನ ಮಧ್ಯ ಹೋರಾಟ ನಡೆಸುತ್ತಿದ್ದಾನೆ.
ಯಕಪ್ಪ ತಳವಾರ (60), ಭಾಷಾಸಾಬ (22) ಕೊಲೆಯಾದವರು. ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗವೆ.ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಸ್ಥಳಕ್ಕೆ ಎಸ್ಪಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. 4 ಜಿಲ್ಲಾ ಶಶಸ್ತ್ರ ಮೀಸಲು ಪಡೆ, ಡಿ ವೈ ಎಸ್ ಪಿ ಸಹಿತ ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸುತ್ತಿದ್ದಾರೆ.
ಘಟನೆ ಸಂಬಂದ ಕೆಲ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನು ಖಂಡಿಸಿ ಸಮುದಾಯ ಜನರು ಪೊಲೀಸರ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ಜನರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.