ಮುರುಘಾಮಠ ಜಾತ್ರಾ ಮಹೋತ್ಸವ ಫೆ. 3ರಂದು

29 Dwd 1 Dr. Mallikarjun mahaswamiji
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ 95ನೇ ಜಾತ್ರಾ ಮಹೋತ್ಸವ, ಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ, ಶಿವಾನುಭವ ಚಿಂತನ, ವಚನ ನೃತ್ಯ ಹಾಗೂ ಗಾಯನ ಕಾರ್ಯಕ್ರಮಗಳು ಜ. 30ರಿಂದ ಫೆ. 3ರವರೆಗೆ ಜರುಗಲಿವೆ ಎಂದು ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ತಿಳಿಸಿದರು.

ನಗರದ ಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 30ರಂದು ಬೆಳಗ್ಗೆ 9ಕ್ಕೆ ಪ್ರಭುಸ್ವಾಮಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ನೇತೃತ್ವದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಲಿದೆ. ಸಂಜೆ 7ಕ್ಕೆ ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ ಉದ್ಘಾಟನೆ ನೆರವೇರುವುದು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜಾತ್ರಾ ಮಹೋತ್ಸವ ಉದ್ಘಾಟಿಸುವರು. ಗುಳೇದಗುಡ್ಡ ಬೃಹನ್ಮಠದ ಶ್ರೀ ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿಗೆ ಗುರುವಂದನೆ ನೆರವೇರಿಸಲಾಗುವುದು. ವೈಶುದೀಪ ಫೌಂಡೇಷನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಶಾಸಕ ಎನ್.ಎಚ್. ಕೋನರಡ್ಡಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಫೆ. 2ರ ಸಂಜೆ 7ಕ್ಕೆ ಇಂಗಳೇಶ್ವರ ಮಠದ ಶ್ರೀ ಚನ್ನಬಸವ ಸ್ವಾಮೀಜಿಗೆ ` ಶ್ರೀ ಮೃತ್ಯುಂಜಯ- ಮಹಾಂತ' ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗದಗಮ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ಶ್ರೀ ಗುರುಮಹಾಂತ ಸ್ವಾಮೀಜಿ, ಡಾ. ಮಹಾಂತಪ್ರಭು ಸ್ವಾಮೀಜಿ ಸಮ್ಮುಖ ವಹಿಸುವರು. ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಮಹಾಂತೇಶ ಕವಟಗಿಮಠ ಅತಿಥಿಯಾಗಿ ಪಾಲ್ಗೊಳ್ಳುವರು. ಫೆ. 3ರಂದು ಬೆಳಗ್ಗೆ 4 ಗಂಟೆಗೆ ಲಿಂಗದೀಕ್ಷೆ ಕಾರ್ಯಕ್ರಮ ಜರುಗಲಿದೆ. ಸಂಜೆ 4ಕ್ಕೆ ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳವರ ರಥೋತ್ಸವ ಜರುಗುವುದು ಎಂದರು.

ಮಠದ ಆಡಳಿತ ಮಂಡಳಿ ಪದಾಽಕಾರಿಗಳಾದ ನಾಗರಾಜ ಪm್ಟಣಶೆಟ್ಟಿ, ಡಿ.ಬಿ. ಲಕಮನಹಳ್ಳಿ, ವಿ.ಎಸ್. ಕಟಗಿ, ಸಿ.ಎಸ್. ಪಾಟೀಲ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net