ಮೂರುಸಾವಿರ ಮಠದಲ್ಲಿ ಶ್ರಾವಣ ಜಾತ್ರಾ ಮಹೋತ್ಸವ, ಆರು ಕೃತಿಗಳ ಲೋಕಾರ್ಪಣೆ

IMG-20240831-WA0038_1.jpg
Published on

ಹುಬ್ಬಳ್ಳಿ: ಇಲ್ಲಿಯ ಮೂರುಸಾವಿರ ಮಠ ಶ್ರಾವಣ ಮಾಸ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಮಠದಿಂದ ಪ್ರಕಟಗೊಂಡ ಆರು ಗ್ರಂಥಗಳನ್ನು ಲೋಕಾರ್ಪಣೆ ಮಾಡಲಾಯಿತು.

ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ, ಪುಸ್ತಕಗಳು ಮಾನವನ ಜೀವನ ಶೈಲಿಯನ್ನು ಬದಲಾವಣೆ ಮಾಡುತ್ತವೆ. ಪುಸ್ತಕಗಳನ್ನು ಓದುತ್ತ ಹೋದರೆ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುತ್ತದೆ ಎಂದರು.

ಶ್ರೀಮಠದಿಂದ ಪ್ರಸಕ್ತ ವರ್ಷ ಆರು ಪುಸ್ತಕಗಳನ್ನು ಪ್ರಕಟಣೆ ಮಾಡಲಾಗಿದೆ. ಪುಸ್ತಕಗಳಲ್ಲಿ ಇರುವ ವಿಷಯವು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತವೆ ಎಂದರು.

ಸಾಹಿತಿ ಗೋ.ರು. ಚನ್ನಬಸಪ್ಪ ಅವರು ಮಾತನಾಡಿ, ಮೂರುಸಾವಿರ ಮಠದ ಸಾಮಾಜಿಕ, ಧಾಮಿರ್ಕ, ಶೈಕ್ಷಣಿಕ ಹಾಗೂ ಸಾಹಿತ್ಯಕ ಸೇವೆಯನ್ನು ಸ್ಮರಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಧಾರವಾಡ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸದಸ್ಯರಿಗೆ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಎಂಎಲ್ಸಿ ಮೋಹನ ಲಿಂಬಿಕಾಯಿ ಮಾತನಾಡಿದರು.

ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮೋಹನ ಅಸುಂಡಿ, ನಾಗರಾಜ ಗೌರಿ, ಸಿ.ಆರ್. ಎರವಿನತೇಲಿಮಠ, ಚನ್ನಬಸಪ್ಪ ಧಾರವಾಡಶೆಟ್ಟರ ಇತರರು ಪಾಲ್ಗೊಂಡಿದ್ದರು.
ಪ್ರಾಧ್ಯಾಪಕಿ ಸುಪ್ರಿಯಾ ಮಲಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net