ಶ್ರೀ ಗುರುಸಿದ್ದೇಶ್ವರರ ರಥೋತ್ಸವ 2ರಂದು

Published on

ಹುಬ್ಬಳ್ಳಿ: ಇಲ್ಲಿಯ ಶ್ರೀ ಜಗದ್ಗುರು ಮೂರುಸಾವಿರ ಮಠ ಮಹಾಸಂಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಕರ್ತೃ ಶ್ರೀ ಜಗದ್ಗುರು ಗುರುಸಿದ್ದೇಶ್ವರರ ಗದ್ದುಗೆಗೆ ನಿತ್ಯ ವಿಶೇಷ ಪೂಜೆ ಹಾಗೂ ಜಾತ್ರಾ ಮಹೋತ್ಸವ ನಡೆಯುತ್ತಿದೆ.

ಸೆ. 2ರಂದು ಶ್ರಾವಣ ಕೊನೇ ಸೋಮವಾರ ಮಧ್ಯಾಹ್ನ 3.30ಕ್ಕೆ ಪಲ್ಲಕ್ಕಿ ಉತ್ಸವ, ಸಂಜೆ 5ಕ್ಕೆ ಕರ್ತೃ ಶ್ರೀ ಜಗದ್ಗುರು ಗುರುಸಿದ್ದೇಶ್ವರರ ರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ಶ್ರೀ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಶೂನ್ಯ ಸಿಂಹಾಸನಾರೋಹಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net