ಇತಿಹಾಸದ ಹೆಜ್ಜೆ ಗುರುತು ಮರೆಯುವಂತಿಲ್ಲ

vastu sangrahalaya
Published on

ಬಳ್ಳಾರಿ: ಇತಿಹಾಸ ಮತ್ತು ವಸ್ತು ಸಂಗ್ರಹಾಲಯಗಳಿಗೆ ಅವಿನಾಭಾವ ಸಂಬಂಧವಿದ್ದು, ಮ್ಯೂಸಿಯಂಗಳು ಮಾನವನು ಪ್ರಾಚೀನ ಕಾಲದಿಂದ ಆಧುನಿಕತೆಯೆಡೆಗೆ ಸಾಗಿಬಂದ ಪುರಾವೆ ತಿಳಿಸುತ್ತವೆ. ನಾವು ಈ ದಿನದಲ್ಲಿ ಏನಾಗಿದ್ದೀವಿ ಮತ್ತು ಹೇಗಿದ್ದೇವೆ ಎಂಬುದನ್ನು ತಿಳಿಯುವುದೇ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನದ ವಿಶೇಷ ಎಂದು ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ನಿರ್ದೇಶಕ ಪ್ರೊ..ರವಿಶೆಟ್ಟರ್ ಕೋರಿ ಹೇಳಿದರು.

ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯ, ಬಳ್ಳಾರಿ ಹೆರಿಟೇಜ್ ಫೌಂಡೇಷನ್ ಹಾಗೂ ಹಂಪಿಯ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಇತಿಹಾಸದ ಹೆಜ್ಜೆ ಗುರುತು ವಸ್ತು ಸಂಗ್ರಹಾಲಯ

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸವಾಗಿದ್ದು, ಅದರಲ್ಲಿ ವೈದ್ಯಕೀಯ ಕ್ಷೇತ್ರ ತನ್ನದೇ ಆದ ಸಹಭಾಗಿತ್ವ ಹೊಂದಿದೆ. ವಾಸ್ತವವಾಗಿ ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯವು ಶಿಲಾಯುಗದ ಉಪಕರಣಗಳ ವಿಶಿಷ್ಟವಾದ ಇತಿಹಾಸ ಪೂರ್ವ ಮಾಹಿತಿ ಒಳಗೊಂಡಿದೆ ಎಂದರು.

ಈ ಸಂಗ್ರಹಾಲಯದಲ್ಲಿ ಹೆಚ್ಚಿನವು ಕಲ್ಲಿನ ಉಪಕರಣಗಳು ಮತ್ತು ಕುಂಬಾರಿಕೆ, ಬಿಳಿ ಚಿಪ್ಪಿನ ಮೂಳೆ ಮತ್ತು ಮಣಿಗಳು, ಕಬ್ಬಿಣದ ಉಪಕರಣಗಳು ಮತ್ತು ಟೆರಾಕೋಟಾ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಶಿಲಾಯುಗದ ಮೇಲೆ ಕೇಂದ್ರೀಕೃತವಾಗಿರುವ ಏಕೈಕ ವಸ್ತು ಸಂಗ್ರಹಾಲಯ ಇದಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net