ಸಂಗೀತ ಪರೀಕ್ಷೆ ಮುಂದೂಡಿಕೆ

Published on

ಹುಬ್ಬಳ್ಳಿ: ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಜುಲೈ 27 ಹಾಗೂ 28ರಂದು ಏರ್ಪಡಿಸಿದ್ದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಳಗಾವಿ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಅನೇಕ ಹೆದ್ದಾರಿಗಳು ಬಂದ್ ಆಗಿವೆ. ಹಾಗಾಗಿ ಬೆಳಗಾವಿಯ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದ್ದ ಪರೀಕ್ಷೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net