

ಬೆಳಗಾವಿ: ಸಂಗೀತ ಎಂಬುವುದು ಸಾಧಾರಣ ಕಲೆಯಲ್ಲ. ಶ್ರದ್ಧೆಯಿಂದ ಶಾಸ್ತ್ರಬದ್ಧವಾಗಿ ಏಕಾಗ್ರತೆಯಿಂದ ಕಲೆತಾಗ ಮಾತ್ರ ಸಂಗೀತ ಒಲಿಯುತ್ತದೆ ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಹೇಳಿದರು.
ಹುಕ್ಕೇರಿ ತಾಲೂಕಿನ ನರಸಿಂಗಪುರದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕಿಯರ ತರಬೇತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಂಸತಿ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂಗೀತ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಕನ್ನಡ ಮತ್ತು ಸಂಸತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಹೇಶ ಭಜಂತ್ರಿ, ಸಂಗೀತ ತರಬೇತಿ ಶಿಕ್ಷಕಿ ಹಾಗೂ ಗಾಯಕಿ ರೂಪಾ ಖಡಗಾಂವಿ ಇದ್ದರು.